ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.
EN
Copywork
Kannada OKCV · 19:9-30 David Returns to Jerusalem
Copywork is not a speed-typing drill but time to re-hold the words and flow of Scripture, one verse at a time. Your input is saved temporarily in this browser, and to your account when you are signed in.
Practice by section · 2 Samuel
ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.
ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?
ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.
ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.
ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.
ಅರಸನು ತಿರುಗಿ ಯೊರ್ದನಿನವರೆಗೂ ಬಂದನು.
ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.
ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.
ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು.
“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.
ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.
ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.
ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.
ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.
ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.
ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.
ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.
ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.