ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ.
KO
Copywork
Kannada OKCV 신명기 32장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 신명기
ನನ್ನ ಬೋಧನೆ ಮಳೆಯಂತೆ ಸುರಿಯುವುದು.
ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ.
ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು.
ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು.
ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ?
ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ.
ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ,
ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ.
ದೇವರು ಬರಿದಾದ ಮರುಭೂಮಿಯಲ್ಲಿ
ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ,
ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು.
ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ,
ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ,
ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು.
ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು.
ದೇವರಿಗೆ ಅಲ್ಲ, ದೆವ್ವಗಳಿಗೆ,
ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ,
ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ
ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು,
ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು.
ಏಕೆಂದರೆ ನನ್ನ ರೋಷ ಬೆಂಕಿಯಂತಿದೆ,
“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು.
ಅವರು ಹಸಿವೆಯಿಂದ ಬಳಲಿ ಹೋಗುವರು,
ಮನೆಯ ಹೊರಗೆ ಖಡ್ಗವೂ
ನಾನು ಅವರನ್ನು ಚದರಿಸಿಬಿಡುವೆನು.
ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು,
ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ.
ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು,
ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ,
ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ.
ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ,
ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ,
“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ?
ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ.
ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು.
ಆಗ ಯೆಹೋವ ದೇವರು ಹೀಗನ್ನುವರು:
ಅವರ ಬಲಿಗಳ ಕೊಬ್ಬನ್ನು ತಿಂದಂಥ,
“ನಾನು ಇರುವಾತನೇ ಆಗಿದ್ದೇನೆ!
ಆಕಾಶದ ಕಡೆ ನನ್ನ ಕೈಯೆತ್ತಿ,
ನಾನು ಮಿಂಚುವ ಖಡ್ಗವನ್ನು ಹದಮಾಡಿ,
ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ,
ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ.
ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,
“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.
ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.
ಆ ದಿವಸವೇ ಯೆಹೋವ ದೇವರು ಮೋಶೆಗೆ,
“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.
ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.
ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.
ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.