ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.
JA
Copywork
Kannada OKCV Matthew 17장
写経は速く終える入力練習ではなく、一節ずつみ言葉の文と流れを改めて受け止める時間です。入力内容はこのブラウザに一時保存され、ログインするとアカウントにも保存されます。
小見出し単位で進める · Matthew
ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.
ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.
ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.
ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.
ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.
ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,
“ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.
ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.
ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.
ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.
ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.
ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.
ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು.
“ಪರರಿಂದ,” ಎಂದು ಪೇತ್ರನು ಹೇಳಿದನು.
ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.