ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತಮ್ಮ ಶಿಷ್ಯರಿಗೆ,
JA
Copywork
Kannada OKCV Matthew 26장
写経は速く終える入力練習ではなく、一節ずつみ言葉の文と流れを改めて受け止める時間です。入力内容はこのブラウザに一時保存され、ログインするとアカウントにも保存されます。
小見出し単位で進める · Matthew
“ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.
ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.
ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದರು.
ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.
ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?
ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.
ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.
ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತ ಎಂಬುವನು ಮುಖ್ಯಯಾಜಕರ ಬಳಿಗೆ ಹೋಗಿ,
“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.
ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭವನ್ನು ಕಾಯುತ್ತಿದ್ದನು.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.
ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.
ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು.
ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು.
ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.
ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು.
ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು.
ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.
ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು.
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.
ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ.
ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.
ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.
ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.
ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.
ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು.
ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.
ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು.
ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.
ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.
ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.
ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು.
ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು.
ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.
ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.
ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.
ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.
ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,” ಎಂದು ಹೇಳಿದರು.
ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.
ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?
ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.
ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.
ಯೇಸುವನ್ನು ಹಿಡಿದಿದ್ದವರು ಅವರನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಲ್ಲಿ ನಿಯಮ ಬೋಧಕರೂ ಹಿರಿಯರೂ ಕೂಡಿ ಬಂದಿದ್ದರು.
ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.
ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.
ಬಹುಮಂದಿ ಸುಳ್ಳುಸಾಕ್ಷಿಗಳು ಬಂದರೂ ಅವರಿಗೆ ಸರಿಯಾದ ಸಾಕ್ಷ್ಯವು ದೊರೆಯಲಿಲ್ಲ.
“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.
ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು.
ಆದರೆ ಯೇಸು ಸುಮ್ಮನಿದ್ದರು.
ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ
ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ,
ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,
“ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು,” ಎಂದರು.
ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.
ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.
ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.
ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು.
ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.
ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು.
ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.