ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.
JA
Copywork
Kannada OKCV Romans 10장
写経は速く終える入力練習ではなく、一節ずつみ言葉の文と流れを改めて受け止める時間です。入力内容はこのブラウザに一時保存され、ログインするとアカウントにも保存されます。
小見出し単位で進める · Romans
ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.
ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.
ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.
ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.
ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’
ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.”
ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”
ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.
ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?
ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.
ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ:
ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು,
ಆದರೆ ಯೆಶಾಯನು ಬಹು ಧೈರ್ಯವಾಗಿ,
ಆದರೆ ಇಸ್ರಾಯೇಲರ ಕುರಿತಾಗಿ,