FIL
FIL Filipino
M'Cheyne Bible Journey
Plano sa Pagbasa ng Bibliya — M'Cheyne Isang Taon
Sundin itong Bible Reading Plan sa apat na sipi sa isang araw—ang Lumang Tipan minsan at ang Bagong Tipan at Mga Awit dalawang beses sa isang taon.
KO Koreano
EN Ingles
CN Intsik
JP Hapon
PH mga wika sa Pilipinas
HI Hindi
BN Bengali
TA Tamil
TE Telugu
ML Malayalam
FA Persiyano
MY Burmese
NE Nepali
MR Marathi
KN Kannada
HA Hausa
YO Yoruba
SW Swahili
IG Igbo
ID Indones
PT Portuges
VI Biyetnames
AR Arabe
RU Ruso
UK Ukrainiano
RO Rumano
IT Italyano
FI Pinlandes
TO Tongan
HR Kroatyano
SR Serbiano
TR Turko
HU Unggaro
PL Polako
SK Eslobako
LA Latin
NL Olandes
CS Tseko
FR Pranses
ES Espanyol
DE Aleman
OT Iba pang mga wika
Pagkumpirma ng pagbabasa
Natapos mo ba itong M'Cheyne day?
Kumpirmahin ito upang markahan ang araw na ito na kumpleto sa iyong tsart ng pag-unlad ng M'Cheyne.
레위기 2, 3
Laws for the Grain Offering
1“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
3ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
Baked and Cooked Grain Offerings
4“ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
5ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.
7ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
8ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.
9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.
10ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
Regulations on Yeast and Salt
11“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.
12ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.
13ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
Grain Offering of Firstfruits
14“ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.
15ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.
16ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
Fellowship Offering from the Herd
1“ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.
2ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
3ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
4ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
5ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.
Fellowship Offering from the Flock
6“ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.
7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
9ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
10ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
11ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.
Fellowship Offering of a Goat
12“ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
15ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
16ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.
17“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.
요한복음 21
Jesus Appears at the Sea of Tiberias
1ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:
2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
3ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.
5ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು,
6ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.
7ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು.
9ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.
10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ,” ಎಂದರು.
11ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.
12ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು.
14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
Jesus Restores Peter
15ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು,
16ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು,
17ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು.
18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.
19ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
20ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.
21ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು.
22ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.
23ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.
24ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.
잠언 18
The Power of Words and the Wisdom of Friendship
1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ
2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ;
3ದುಷ್ಟತ್ವವು ಬಂದಾಗ ತಾತ್ಸಾರವೂ,
4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ,
5ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ,
6ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ
7ಬುದ್ಧಿಹೀನನ ಬಾಯಿಯು ಅವನ ನಾಶನ;
8ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು;
9ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು,
10ಯೆಹೋವ ದೇವರ ನಾಮವು ಬಲವಾದ ಬುರುಜು;
11ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ
12ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು;
13ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ
14ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು;
15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ;
16ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ;
17ಪ್ರತಿವಾದಿ ಬಂದು ಪರಿಶೀಲಿಸುವವರೆಗೆ,
18ಚೀಟು ಹಾಕುವುದರಿಂದ ವ್ಯಾಜ್ಯಶಮನ;
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ;
20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು;
21ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
22ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
23ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ;
24ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ;
골로새서 1
Greeting
1ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,
2ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ:
Thanksgiving and Prayer for the Colossians
3ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
4ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.
5ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.
6ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.
7ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
8ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ.
Prayer for Wisdom to Walk Worthily
9ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.
10ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ
11ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,
12ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.
13ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.
14ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.
The Supremacy of Christ
15ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.
16ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.
17ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.
18ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.
19ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.
20ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.
Reconciled Through the Cross
21ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.
22ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.
23ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.
Paul's Labor and Ministry for the Church
24ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.
25ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.
26ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.
27ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.
28ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.
29ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.