KO
KO 한국어
EN 영어
CN 중국어
JP 일본어
PH 필리핀어권
HI 힌디어
BN 벵골어
TA 타밀어
TE 텔루구어
ML 말라얄람어
FA 페르시아어
MY 버마어
NE 네팔어
MR 마라티어
KN 칸나다어
HA 하우사어
YO 요루바어
SW 스와힐리어
IG 이그보어
ID 인도네시아어
PT 포르투갈어
VI 베트남어
AR 아랍어
RU 러시아어
UK 우크라이나어
RO 루마니아어
IT 이탈리아어
FI 핀란드어
TO 통가어
HR 크로아티아어
SR 세르비아어
TR 튀르키예어
HU 헝가리어
PL 폴란드어
SK 슬로바키아어
LA 라틴어
NL 네덜란드어
CS 체코어
FR 프랑스어
ES 스페인어
DE 독일어
OT 기타 언어
통독 확인
이 일차의 맥체인 본문을 완료했나요?
확인 버튼을 누르면 마이페이지 맥체인 진도표에 완료로 기록됩니다.
여호수아 3
The People Come to the Jordan River
1ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.
2ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ,
3ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
4ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.
5ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.
6ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.
Instructions for Crossing the Jordan
7ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.
8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.
9ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.
10ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.
11ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.
12ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.
13ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.
Crossing the Jordan on Dry Ground
14ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.
15ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,
16ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.
17ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.
시편 126, 127, 128
The Joyful Sheaves of One Who Sowed in Tears
1ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ
2ಆಗ ನಮ್ಮ ಬಾಯಿ ನಗೆಯಿಂದಲೂ,
3ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ;
4ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ
5ಕಣ್ಣೀರಿನಿಂದ ಬಿತ್ತುವವರು,
6ಬಿತ್ತಲು ಬೀಜವನ್ನು ಹೊತ್ತುಕೊಂಡು
Unless the Lord Builds the House
1ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ,
2ನೀವು ಆಹಾರಕ್ಕಾಗಿ ಶ್ರಮೆಪಟ್ಟು,
3ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
4ಯೌವನದಲ್ಲಿ ಹುಟ್ಟಿದ ಮಕ್ಕಳು,
5ಬಾಣಗಳನ್ನು ಬತ್ತಳಿಕೆಯಿಂದ
The Blessing of a Home That Fears the Lord
1ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ
2ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ
3ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ
4ಯೆಹೋವ ದೇವರಿಗೆ ಭಯಪಡುವ ಮನುಷ್ಯನು
5ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ
6ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ
이사야 63
The Warrior Who Treads Edom and Returns
1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು
2ನಿನ್ನ ವಸ್ತ್ರಗಳು ಏಕೆ ಕೆಂಪಾದವು?
3“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ.
4ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ.
5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ,
6ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು.
A Plea Remembering the LORD's Former Mercies
7ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ,
8ಆತನು ನಿಶ್ಚಯವಾಗಿ, “ಅವರು ನನ್ನ ಜನರೇ,
9ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು.
10ಆದರೆ ಅವರು ತಿರುಗಿಬಿದ್ದು,
11ಆಗ ಆತನು ಪೂರ್ವಕಾಲದ ದಿವಸಗಳನ್ನೂ,
12ಮೋಶೆಯ ಬಲಗೈಯ ಮುಖಾಂತರ ತನ್ನ
13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ
14ಪಶುವು ತಗ್ಗಿಗೆ ಇಳಿಯುವ ಪ್ರಕಾರ,
15ಆಕಾಶದಿಂದ ಕೆಳಗೆ ನೋಡಿರಿ,
16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ,
17ಯೆಹೋವ ದೇವರೇ, ಏಕೆ ನಮ್ಮನ್ನು
18ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು.
19ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ.
마태복음 11
1ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.
The Question from John the Baptist
2ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,
3“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.
4ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ;
5ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.
6ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.
7ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?
8ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.
9ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.
10ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
11ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.
12ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.
13ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.
14ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.
15ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
16“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:
17“ ‘ನಾವು ನಿಮಗಾಗಿ ಕೊಳಲೂದಿದೆವು,
18“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.
19ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.
Woe to the Unrepentant Cities
20ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,
21“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.
22ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.
23ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.
24ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Come to Me, All Who Labor
25ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.
26ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.
27“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.
28“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
29ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
30ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.