KO
KO 한국어
EN 영어
CN 중국어
JP 일본어
PH 필리핀어권
HI 힌디어
BN 벵골어
TA 타밀어
TE 텔루구어
ML 말라얄람어
FA 페르시아어
MY 버마어
NE 네팔어
MR 마라티어
KN 칸나다어
HA 하우사어
YO 요루바어
SW 스와힐리어
IG 이그보어
ID 인도네시아어
PT 포르투갈어
VI 베트남어
AR 아랍어
RU 러시아어
UK 우크라이나어
RO 루마니아어
IT 이탈리아어
FI 핀란드어
TO 통가어
HR 크로아티아어
SR 세르비아어
TR 튀르키예어
HU 헝가리어
PL 폴란드어
SK 슬로바키아어
LA 라틴어
NL 네덜란드어
CS 체코어
FR 프랑스어
ES 스페인어
DE 독일어
OT 기타 언어
통독 확인
이 일차의 맥체인 본문을 완료했나요?
확인 버튼을 누르면 마이페이지 맥체인 진도표에 완료로 기록됩니다.
창세기 1
God Creates the Heavens and the Earth
1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.
The First Day: Light Separated from Darkness
2ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.
3ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.
4ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.
5ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
The Second Day: The Expanse Made
6ನಂತರ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಗುಮ್ಮಟವಾಗಲಿ, ಅದು ನೀರಿನಿಂದ ಭೂಮಿಯನ್ನು ಪ್ರತ್ಯೇಕ ಮಾಡಲಿ,” ಎಂದರು.
7ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.
8ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
The Third Day: Land, Sea, and Vegetation
9ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.
10ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
11ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.
12ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.
13ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
The Fourth Day: The Sun, Moon, and Stars
14ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.
16ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು.
17ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ
18ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
19ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
The Fifth Day: Fish and Birds
20ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.
21ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
22ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.
23ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
The Sixth Day: Animals and Mankind
24ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.
25ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
26ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.
27ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
28ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.
29ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.
30ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.
31ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
마태복음 1
The Genealogy of Jesus Christ
1ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:
2ಅಬ್ರಹಾಮನು ಇಸಾಕನ ತಂದೆ,
3ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ,
4ಅರಾಮನು ಅಮ್ಮೀನಾದಾಬನ ತಂದೆ,
5ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು,
6ಇಷಯನು ರಾಜನಾದ ದಾವೀದನ ತಂದೆ.
7ಸೊಲೊಮೋನನು ರೆಹಬ್ಬಾಮನ ತಂದೆ,
8ಆಸನು ಯೆಹೋಷಾಫಾಟನ ತಂದೆ,
9ಉಜ್ಜೀಯನು ಯೋತಾಮನ ತಂದೆ,
10ಹಿಜ್ಕೀಯನು ಮನಸ್ಸೆಯ ತಂದೆ,
11ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.
12ಬಾಬಿಲೋನಿಗೆ ಸೆರೆಹೋದ ಮೇಲೆ:
13ಜೆರುಬ್ಬಾಬೆಲನು ಅಬಿಹೂದನ ತಂದೆ,
14ಅಜೋರನು ಸದೋಕನ ತಂದೆ,
15ಎಲಿಹೂದನು ಎಲಿಯಾಜರನ ತಂದೆ,
16ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.
17ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
The Birth of Jesus
18ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.
19ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.
20ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.
21ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು ’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.
22ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:
23“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.
24ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
25ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.
에스라 1
The Proclamation of Cyrus
1ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:
2“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ:
3ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!
4ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”
The Temple Vessels Restored and the Return Prepared
5ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.
6ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.
7ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.
8ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.
9ಅವುಗಳ ಲೆಕ್ಕವು ಹೀಗಿವೆ:
10ಬಂಗಾರದ 30 ಬಟ್ಟಲುಗಳು.
11ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು.
사도행전 1
Preface to Theophilus
1ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.
2ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.
3ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.
4ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.
5ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
The Ascension of Jesus and the Promise of His Return
6ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.
7ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.
8ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.
9ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
10ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,
11“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.
The Disciples Devoted to Prayer in the Upper Room
12ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.
13ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ:
14ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
Matthias Chosen to Replace Judas
15ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:
16“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.
17ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”
18ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.
19ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.
20ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ:
21ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,
22ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.
23ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.
24ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,
25ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.
26ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.