맥체인 성경 여정

성경읽기표 — 맥체인 1년 통독

성경읽기표를 따라 하루 4본문을 읽으며 1년에 구약 1회, 신약과 시편을 2회 통독합니다.

365 1년 고정 통독표
4 하루 4본문
274 선택한 일차
‹ 274일차 / 총 365일 ›
역본

통독 확인

이 일차의 맥체인 본문을 완료했나요?

확인 버튼을 누르면 마이페이지 맥체인 진도표에 완료로 기록됩니다.

가정 예배 · 구약

열왕기상 3

본문 열기 →
3장

Solomon Marries Pharaoh's Daughter

1ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.

2ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.

3ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.

Solomon Asks for Wisdom at Gibeon

4ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.

5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.

6ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.

7“ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.

8ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ.

9ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.

10ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು.

11ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,

12ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.

13ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.

14ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.

15ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು.

Solomon's Wise Judgment Between Two Women

16ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು.

17ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.

18ನಾನು ಅವಳ ಸಂಗಡ ಮನೆಯಲ್ಲಿರುವಾಗ, ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ, ಈ ಹೆಣ್ಣು ಮಗಳು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತ್ಯಾರೂ ಇಲ್ಲ.

19“ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು.

20ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.

21ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.

22ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು.

23ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ,

24ಅರಸನು, “ಖಡ್ಗವನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಅವರು ಖಡ್ಗವನ್ನು ಅರಸನ ಬಳಿಗೆ ತಂದರು.

25ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು.

26ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು.

27ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು.

28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.

가정 예배 · 신약

에베소서 1

본문 열기 →
1장

Greeting

1ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು,

2ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Spiritual Blessings in Christ

3ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.

4ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.

5ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.

6ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.

7ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.

8ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ

9ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,

10ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.

11ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.

12ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.

13ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.

14ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.

Prayer for Spiritual Wisdom

15ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,

16ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.

17ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.

18ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.

19ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.

20ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,

21ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.

22ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.

23ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.

개인 경건 · 구약/시편

에스겔 34

본문 열기 →
34장

Rebuke of the Shepherds Who Did Not Tend the Flock

1ಯೆಹೋವ ದೇವರ ವಾಕ್ಯವು ನನಗೆ ಬಂದಿತು:

2“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?

3ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.

4ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

5ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.

6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

7“ ‘ಆದ್ದರಿಂದ ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.

8ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ

9ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.

10ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.

The Shepherd Who Will Himself Seek and Feed the Flock

11“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.

12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.

13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.

14ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.

15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

16ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.

17“ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.

18ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?

19ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.

20“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.

21ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.

22ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು.

One Shepherd, David, and a Covenant of Peace

23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

24ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.

25“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.

27ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.

28ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.

29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.

30ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

31ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

개인 경건 · 신약

시편 83, 84

본문 열기 →
83장

An Appeal Against United Adversaries

1ದೇವರೇ, ಮೌನವಾಗಿರಬೇಡಿರಿ.

2ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ.

3ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ.

4ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ;

5ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ.

6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು

7ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು,

8ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು;

9ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ

10ಅವರು ಎಂದೋರಿನಲ್ಲಿ ನಾಶವಾಗಿ

11ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ

12ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು

13ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ,

14ಅಡವಿ ಸುಡುವ ಬೆಂಕಿಯ ಹಾಗೆಯೂ,

15ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ,

16ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ

17ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ.

18ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ

84장

A Pilgrim Longing for the Lord's Courts

1ಸೇನಾಧೀಶ್ವರ ಯೆಹೋವ ದೇವರೇ,

2ಯೆಹೋವ ದೇವರ ಅಂಗಳಗಳಲ್ಲಿ ಸೇರಲು

3ಓ ಸೇನಾಧೀಶ್ವರ ಯೆಹೋವ ದೇವರೇ,

4ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು;

5ನಿಮ್ಮಲ್ಲಿ ಯಾರು ಬಲಹೊಂದಿರುವರೋ,

6ಬಾಕಾ ತಗ್ಗನ್ನು ದಾಟುವಾಗ

7ಅವರು ಬಲದಿಂದ ಬಲಕ್ಕೆ ಸಾಗಿ,

8ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ.

9ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ.

10ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು

11ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ.

12ಸೇನಾಧೀಶ್ವರ ಯೆಹೋವ ದೇವರೇ,