Jornada bíblica M’Cheyne

Plano de leitura bíblica — M’Cheyne um ano

Siga este plano de leitura bíblica através de quatro passagens por dia — o Antigo Testamento uma vez e o Novo Testamento e os Salmos duas vezes por ano.

365 Plano fixo de um ano
4 Quatro leituras por dia
271 Dia selecionado
‹ Dia 271 / 365 Hoje ›
Versão

Confirmação de leitura

Concluiu este dia de M’Cheyne?

Confirme para marcar este dia como concluído na sua tabela de progresso M’Cheyne.

Família · Antigo Testamento

사무엘하 24

Abrir no leitor →
Capítulo 24

David's Census and Its Punishment

1ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.

2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.

3ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.

4ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

5ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.

6ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.

7ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.

8ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.

10ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.

11ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,

12“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.

13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.

14ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.

15ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

16ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.

17ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

David Builds an Altar at the Threshing Floor of Araunah

18ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.

19ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.

20ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.

21ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು.

22ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.

23ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.

24ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು.

25ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.

Família · Novo Testamento

갈라디아서 4

Abrir no leitor →
Capítulo 4

Called from Slaves to Sons

1ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ.

2ಆದರೆ ಅವನ ತಂದೆಯು ಮುಂಚಿತವಾಗಿ ನೇಮಿಸಿದ ದಿನದವರೆಗೂ ಅವನು ಪೋಷಕರ ಹಾಗೂ ಆಡಳಿತಗಾರರ ಕೈಕೆಳಗಿರುವನು.

3ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.

4ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.

5ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.

6ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.

7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.

Do Not Turn Back to Weak Elemental Principles

8ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.

9ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?

10ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.

11ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.

Paul's Heartfelt Appeal to the Galatians

12ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.

13ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.

14ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.

15ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ.

16ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?

17ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ.

18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.

19ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.

20ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ.

Hagar and Sarah, an Allegory of Two Covenants

21ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.

22ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ.

23ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.

24ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್.

25ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.

26ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.

27ಏಕೆಂದರೆ,

28ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.

29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ, ಈಗಲೂ ನಡೆಯುತ್ತದೆ.

30ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?

31ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ.

Privado · AT / Salmos

에스겔 31

Abrir no leitor →
Capítulo 31

Egypt Likened to a Cedar of Lebanon

1ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

2“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ,

3ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ.

4ಅದನ್ನು ಜಲಪ್ರವಾಹಗಳು ಬೆಳೆಸಿದವು,

5ಆದ್ದರಿಂದ ಅದರ ಎತ್ತರವು

6ಅದರ ಕೊಂಬೆಗಳಲ್ಲಿ ಆಕಾಶದ

7ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ

8ದೇವರ ತೋಟದ ದೇವದಾರುಗಳು

9ನಾನು ಅದನ್ನು ಅದರ ಕೊಂಬೆಗಳ

The Cedar Cut Down and Brought to Sheol

10“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.

11ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.

12ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.

13ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು.

14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.

15“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು.

16ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.

17ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.

18“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ.

Privado · Novo Testamento

시편 79

Abrir no leitor →
Capítulo 79

A Lament over the Defiled Temple

1ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು,

2ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ

3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ

4ನಾವು ನಮ್ಮ ನೆರೆಯವರಿಗೆ ನಿಂದೆಯೂ

5ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ?

6ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ,

7ಏಕೆಂದರೆ ಅವರು ಯಾಕೋಬರನ್ನು ನುಂಗಿಬಿಟ್ಟಿದ್ದಾರೆ.

8ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ.

9ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ,

10ಅವರ ದೇವರು ಎಲ್ಲಿ ಎಂದು

11ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ.

12ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ

13ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ