麥克謙聖經旅程

麥克謙一年通讀

每天 4 段經文,一年讀完舊約 1 次、新約與詩篇 2 次。

365 一年固定通讀表
4 每天 4 段經文
269 選取的日次
‹ 第 269 天 / 共 365 天 ›
譯本

讀經確認

你完成了這一天的麥琴讀經嗎?

點選確認後,會在我的頁面麥琴進度表中記錄為已完成。

家庭崇拜 · 舊約

사무엘하 22

開啟正文 →
第 22 章

David's Song of Thanksgiving

1ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.

2ಅವನು ಹೇಳಿದನು:

3ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು;

4“ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ,

5ಮರಣದಲೆಗಳು ನನ್ನನ್ನು ಆವರಿಸಿಕೊಂಡವು.

6ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು;

7“ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು;

8ಆಗ ದೇವರು ಬೇಸರಗೊಂಡಿದ್ದರಿಂದ

9ಮೂಗಿನಿಂದ ಹೊಗೆ ಬಂದಂತೆಯೂ,

10ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು;

11ಅವರು ಕೆರೂಬಿಯ ಮೇಲೆ ಕೂತು ಹಾರಿದರು,

12ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ

13ಅವರ ಸನ್ನಿಧಿಯ ಪ್ರಕಾಶದಿಂದ

14ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು.

15ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು,

16ಆಗ ಯೆಹೋವ ದೇವರ ಗದರಿಕೆಯಿಂದಲೂ,

17“ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು,

18ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ,

19ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು;

20ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು;

21“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು;

22ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ,

23ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು;

24ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು,

25ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ,

26“ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ;

27ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ,

28ದೀನರನ್ನು ರಕ್ಷಿಸುತ್ತೀರಿ;

29ಯೆಹೋವ ದೇವರೇ, ನನ್ನ ದೀಪವು ನೀವೇ;

30ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು.

31“ದೇವರ ಮಾರ್ಗವು ಪರಿಪೂರ್ಣವಾದದ್ದು;

32ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು?

33ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ;

34ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ,

35ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು.

36ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ,

37ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ,

38“ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು.

39ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು;

40ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ;

41ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ;

42ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ;

43ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು;

44“ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ,

45ವಿದೇಶಿಯರು ನನಗೆ ಅಧೀನರಾದರು;

46ಅವರು ಭಯಗೊಳ್ಳುವರು;

47“ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ.

48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ

49ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ.

50ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು.

51“ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು;

家庭崇拜 · 新約

갈라디아서 2

開啟正文 →
第 2 章

The Gospel to the Gentiles Affirmed by the Apostles

1ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.

2ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.

3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.

4ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

5ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.

6ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.

7ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.

8ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.

9ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.

10ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು.

Paul Rebukes Peter at Antioch

11ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.

12ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.

13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.

14ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.

Justified by Faith

15“ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.

16ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.

17“ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.

18ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ?

19“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.

20ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.

21ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”

個人靈修 · 舊約/詩篇

에스겔 29

開啟正文 →
第 29 章

Judgment on Pharaoh of Egypt Like a Great Monster

1ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

2“ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.

3ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:

4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ,

5ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು.

6ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು.

7ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.

8“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.

9ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ,

10ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.

11ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.

12ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.

13“ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.

14ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.

15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.

16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

The Land of Egypt Given to Nebuchadnezzar

17ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

18“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.

19ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.

20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

21“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”

個人靈修 · 新約

시편 78:1-37

開啟正文 →
第 78 章

God's Deeds Handed Down to the Generations

1ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ;

2ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು.

3ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.

4ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ

5ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ,

6ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ,

7ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು.

8ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ,

9ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ

10ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ.

11ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ

12ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ,

13ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು.

14ದೇವರು ಹಗಲಿನಲ್ಲಿ ಮೇಘದಿಂದಲೂ

15ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ,

16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು,

17ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ,

18ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ,

19ಹೌದು, ಅವರು ದೇವರಿಗೆ

20ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ,

21ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು.

22ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ.

23ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ,

24ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ,

25ದೇವದೂತರ ಆಹಾರವನ್ನು ಮಾನವರು ತಿಂದರು.

26ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ,

27ಧೂಳಿನಂತೆ ಮಾಂಸವನ್ನು ಸುರಿಸಿದರು.

28ಅವರ ಮಧ್ಯದಲ್ಲಿಯೂ

29ಆಗ ಅವರು ತಿಂದು ಬಹಳ ತೃಪ್ತಿಗೊಂಡರು.

30ಅವರು ತಮ್ಮ ಆಶೆಯನ್ನು ಬಿಡದೆ,

31ದೇವರ ಶಿಕ್ಷೆ ಅವರ ಮೇಲೆ ಬಿತ್ತು.

32ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು.

33ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ

34ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು.

35ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು

36ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ,

37ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ.