麥克謙聖經旅程

麥克謙一年通讀

每天 4 段經文,一年讀完舊約 1 次、新約與詩篇 2 次。

365 一年固定通讀表
4 每天 4 段經文
273 選取的日次
‹ 第 273 天 / 共 365 天 ›
譯本

讀經確認

你完成了這一天的麥琴讀經嗎?

點選確認後,會在我的頁面麥琴進度表中記錄為已完成。

家庭崇拜 · 舊約

열왕기상 2

開啟正文 →
第 2 章

David's Last Charge to Solomon

1ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,

2“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.

3ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.

4ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.

5“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.

7“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.

8“ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.

9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.

10ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.

11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.

12ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.

Adonijah Seeks Abishag and Is Put to Death

13ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು.

14ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು.

15ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.

16ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು.

17ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.

18ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.

19ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.

20ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು.

21ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.

22ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.

23ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.

24“ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.

25ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.

Abiathar Banished and Joab Executed

26ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.

27ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

28ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

29ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.

30ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು.

31ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.

32ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.

33ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.

34ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.

35ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.

The End of Shimei Who Broke His Oath

36ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.

37ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.

38ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.

39ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.

40ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.

41ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.

42ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?

43ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.

44ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.

45ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.

46ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು.

家庭崇拜 · 新約

갈라디아서 6

開啟正文 →
第 6 章

Bear One Another's Burdens and Do Good

1ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.

3ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.

4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.

5ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.

6ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.

7ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

8ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.

9ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

10ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.

Boasting Only in the Cross of Christ

11ನನ್ನ ಕೈಯಿಂದ ಎಷ್ಟು ದೊಡ್ಡ ಅಕ್ಷರಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.

12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.

13ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

14ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.

15ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.

16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.

17ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.

18ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.

個人靈修 · 舊約/詩篇

에스겔 33

開啟正文 →
第 33 章

The Duty and Calling of the Watchman

1ಯೆಹೋವ ದೇವರ ವಾಕ್ಯವು ನನಗೆ ಬಂದು:

2“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,

3ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,

4ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.

5ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

6ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’

7“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

8ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.

9ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

The Justice That Judges Each According to His Ways

10“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’

11ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’

12“ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’

13ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.

14ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ

15ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.

16ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.

17“ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.

18ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.

19ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.

20ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”

News of Jerusalem's Fall and the People's Hypocrisy

21ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.

22ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.

23ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

24“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.

25ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?

26ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’

27“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.

28ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.

29ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’

30“ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

31ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.

32ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.

33“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”

個人靈修 · 新約

시편 81, 82

開啟正文 →
第 81 章

A Voice Urging Obedience at the Feast

1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ;

2ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ,

3ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ

4ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ.

5ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ,

6“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು,

7ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು.

8ನನ್ನ ಜನರೇ ಕೇಳಿರಿ, ಇಸ್ರಾಯೇಲೇ,

9ನಿಮ್ಮಲ್ಲಿ ಅನ್ಯದೇವರು ಇರಬಾರದು;

10ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ

11“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ;

12ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು;

13“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು!

14ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು.

15ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು.

16ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು,

第 82 章

A Rebuke Against Unjust Judges

1ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ,

2“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ.

3ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ.

4ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ.

5“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ.

6“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು,

7ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ.

8ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ.