繁
KO 韓語
EN 英語
CN 中文
JP 日語
PH 菲律賓語系
HI 印地語
BN 孟加拉語
TA 坦米爾語
TE 泰盧固語
ML 馬拉雅拉姆語
FA 波斯語
MY 緬甸語
NE 尼泊爾語
MR 馬拉地語
KN 坎那達語
HA 豪薩語
YO 約魯巴語
SW 斯瓦希里語
IG 伊博語
ID 印尼語
PT 葡萄牙語
VI 越南語
AR 阿拉伯語
RU 俄語
UK 烏克蘭語
RO 羅馬尼亞語
IT 義大利語
FI 芬蘭語
TO 東加語
HR 克羅埃西亞語
SR 塞爾維亞語
TR 土耳其語
HU 匈牙利語
PL 波蘭語
SK 斯洛伐克語
LA 拉丁語
NL 荷蘭語
CS 捷克語
FR 法語
ES 西班牙語
DE 德語
OT 其他語言
讀經確認
你完成了這一天的麥琴讀經嗎?
點選確認後,會在我的頁面麥琴進度表中記錄為已完成。
역대하 36
The Reigns of Jehoahaz and Jehoiakim
1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
2ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.
5ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
6ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.
7ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
8ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
The Reigns of Jehoiachin and Zedekiah
9ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
10ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.
11ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.
12ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
14ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
15ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.
16ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.
The Fall of Jerusalem and the Babylonian Exile
17ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.
18ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.
19ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.
20ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.
The Decree of Cyrus for the Return
22ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,
23“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ:
요한계시록 22
The River of the Water of Life and the Tree of Life
1ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,
2ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.
3ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.
4ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.
5ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
The Promise of Coming Soon and the Warning
6ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.
7ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.
8ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
9ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.
10ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.
11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.
12ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.
13ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.
14“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.
15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.
The Final Testimony and the Plea for the Lord
16“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.
17ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
18ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.
19ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.
20ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ.
21ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
말라기 4
The Day of the Lord and the Sun of Righteousness
1“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
2ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.
3ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
I Will Send Elijah
4“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
5“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.
6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”
요한복음 21
Jesus Appears at the Sea of Tiberias
1ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:
2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
3ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.
5ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು,
6ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.
7ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು.
9ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.
10ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ,” ಎಂದರು.
11ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.
12ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು.
14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
Jesus Restores Peter
15ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು,
16ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು,
17ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು.
18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.
19ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
20ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.
21ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು.
22ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.
23ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.
24ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.