繁
KO 韓語
EN 英語
CN 中文
JP 日語
PH 菲律賓語系
HI 印地語
BN 孟加拉語
TA 坦米爾語
TE 泰盧固語
ML 馬拉雅拉姆語
FA 波斯語
MY 緬甸語
NE 尼泊爾語
MR 馬拉地語
KN 坎那達語
HA 豪薩語
YO 約魯巴語
SW 斯瓦希里語
IG 伊博語
ID 印尼語
PT 葡萄牙語
VI 越南語
AR 阿拉伯語
RU 俄語
UK 烏克蘭語
RO 羅馬尼亞語
IT 義大利語
FI 芬蘭語
TO 東加語
HR 克羅埃西亞語
SR 塞爾維亞語
TR 土耳其語
HU 匈牙利語
PL 波蘭語
SK 斯洛伐克語
LA 拉丁語
NL 荷蘭語
CS 捷克語
FR 法語
ES 西班牙語
DE 德語
OT 其他語言
讀經確認
你完成了這一天的麥琴讀經嗎?
點選確認後,會在我的頁面麥琴進度表中記錄為已完成。
레위기 1
Laws for Burnt Offerings
1ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,
2ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
3“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
4ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.
5ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
6ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.
7ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
8ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
9ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Burnt Offering from the Flock
10“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.
11ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
12ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
13ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Burnt Offering of Birds
14“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.
15ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.
16ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.
17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.
요한복음 20
The Empty Tomb
1ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.
2ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು.
3ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.
4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ.
6ಆಗ ಸೀಮೋನ ಪೇತ್ರನು ಸಹ ಅವನ ಹಿಂದೆ ಬಂದು ನೇರವಾಗಿ ಸಮಾಧಿಯೊಳಕ್ಕೆ ಪ್ರವೇಶಿಸಿ, ನಾರುಬಟ್ಟೆಗಳು ಬಿದ್ದಿರುವುದನ್ನೂ
7ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.
8ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು.
9ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.
10ತರುವಾಯ ಆ ಶಿಷ್ಯರು ಉಳಿದವರ ಬಳಿಗೆ ಹೊರಟು ಹೋದರು.
Jesus Appears to Mary Magdalene
11ಆದರೆ ಮರಿಯಳು ಸಮಾಧಿಯ ಹೊರಗೆ ಅಳುತ್ತಾ ನಿಂತಿದ್ದಳು. ಆಕೆಯು ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ,
12ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ಯೇಸುವಿನ ತಲೆಯ ಕಡೆಗೂ ಮತ್ತೊಬ್ಬನು ಅವರ ಪಾದಗಳಿದ್ದ ಕಡೆಗೂ ಕುಳಿತಿರುವುದನ್ನು ಕಂಡಳು.
13ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ,
14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು. ಆದರೆ ಅವರು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
15ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು,
16ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು,
17ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.
18ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.
Jesus Appears to the Disciples
19ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.
20ಇದನ್ನು ಹೇಳಿದ ಮೇಲೆ ತಮ್ಮ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದರು. ಆಗ ಶಿಷ್ಯರು ಕರ್ತನನ್ನು ಕಂಡು ಸಂತೋಷಪಟ್ಟರು.
21ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.
22ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.
23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು,” ಎಂದು ಹೇಳಿದರು.
The Doubt and Faith of Thomas
24ಆದರೆ ಯೇಸು ಬಂದಾಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮನು ಎನಿಸಿಕೊಂಡ ತೋಮನು ಅವರ ಸಂಗಡ ಇರಲಿಲ್ಲ.
25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು.
26ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.
27ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.
28ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.
29ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.
30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ.
31ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.
잠언 17
Avoid Strife and Pursue Harmony
1ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ,
2ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ
3ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ;
4ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ;
5ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ;
6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ;
7ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ;
8ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ;
9ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ;
10ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ
11ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ;
12ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ
13ಉಪಕಾರಕ್ಕೆ ಅಪಕಾರವನ್ನು ಮಾಡುವವನ
14ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು;
15ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು,
16ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ?
17ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ;
18ಬುದ್ಧಿಹೀನನು ಕೈ ಕುಲುಕಿ
19ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ;
20ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ;
21ಬುದ್ಧಿಹೀನ ಹೆತ್ತವನಿಗೆ ವ್ಯಥೆ;
22ಹರ್ಷಹೃದಯವು ಒಳ್ಳೆಯ ಔಷಧ;
23ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ
24ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ.
25ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ,
26ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ,
27ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ;
28ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು;
빌립보서 4
Stand Firm in the Lord and Be of the Same Mind
1ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!
2ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
3ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.
Rejoice Always, Turn Anxiety into Prayer
4ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.
5ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.
6ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
7ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
Think on Whatever Is True and Honorable
8ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.
9ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.
The Secret of Contentment and God Who Supplies Every Need
10ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.
11ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.
12ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.
13ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.
15ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.
16ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.
17ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.
18ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.
19ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
20ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.
Final Greetings and the Blessing of Grace
21ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ.
22ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.
23ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.