麥克謙聖經旅程

麥克謙一年通讀

每天 4 段經文,一年讀完舊約 1 次、新約與詩篇 2 次。

365 一年固定通讀表
4 每天 4 段經文
91 選取的日次
‹ 第 91 天 / 共 365 天 ›
譯本

讀經確認

你完成了這一天的麥琴讀經嗎?

點選確認後,會在我的頁面麥琴進度表中記錄為已完成。

家庭崇拜 · 舊約

레위기 4

開啟正文 →
第 4 章

Sin Offering for the Priest

1ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

2“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:

3“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.

4ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.

5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.

6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

7ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.

8ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,

9ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.

10ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.

11ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ

12ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.

Sin Offering for the Whole Congregation

13“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ

14ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.

15ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.

16ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,

17ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.

18ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.

19ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.

20ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.

21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.

Sin Offering for a Leader

22“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,

23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.

24ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.

25ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.

26ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.

Sin Offering for a Common Person

27“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,

28ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.

29ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.

30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.

31ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

32“ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.

33ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

34ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.

35ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

家庭崇拜 · 新約

시편 1, 2

開啟正文 →
第 1 章

The Way of the Righteous and the Wicked

1ದುಷ್ಟರ ಆಲೋಚನೆಯಂತೆ ನಡೆಯದೆ,

2ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ,

3ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು.

4ಆದರೆ ದುಷ್ಟರು ಹಾಗಲ್ಲ!

5ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು,

6ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ;

第 2 章

God Establishes His Anointed King

1ರಾಷ್ಟ್ರಗಳು ಒಳಸಂಚು ಮಾಡುವುದೂ

2ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ,

3“ಅವರು ಹಾಕಿದ ಬೇಡಿಗಳನ್ನು ಮುರಿದು

4ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು,

5ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ,

6“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ

7ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು:

8ನನ್ನನ್ನು ಕೇಳು,

9ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ,

10ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ.

11ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ,

12ಯೆಹೋವ ದೇವರು ಬೇಸರಗೊಂಡು,

個人靈修 · 舊約/詩篇

잠언 19

開啟正文 →
第 19 章

Poverty, Wealth, and a Life of Integrity

1ಬುದ್ಧಿಹೀನನ ವಕ್ರ ತುಟಿಗಳಿಗಿಂತ,

2ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ;

3ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ,

4ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ;

5ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು;

6ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ.

7ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ;

8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ;

9ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ;

10ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ;

11ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ;

12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ;

13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು;

14ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;

15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ;

16ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ,

17ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ;

18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು;

19ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು;

20ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು;

21ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;

22ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ.

23ಯೆಹೋವ ದೇವರ ಭಯವು ಜೀವದಾಯಕವು;

24ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ,

25ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು;

26ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ

27ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ,

28ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ;

29ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ,

個人靈修 · 新約

골로새서 2

開啟正文 →
第 2 章

Christ, the Mystery of God

1ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

2ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.

3ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.

4ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.

5ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.

Rooted and Built Up in Christ

6ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.

7ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.

Beware of Human Tradition and Empty Philosophy

8ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.

9ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.

10ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.

Dead and Raised with Christ

11ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.

12ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.

13ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.

14ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.

15ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.

The Shadow and the Substance

16ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.

17ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.

18ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.

19ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.

The Worthlessness of Self-Made Asceticism

20ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?

21“ಹಿಡಿಯಬೇಡ! ರುಚಿನೋಡಬೇಡ! ಮುಟ್ಟಬೇಡ!”

22ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!

23ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.